
ಪ್ರಜಾವಾಣಿ ವಾರ್ತೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಸೇವಾ ನಿರತ ಮತ್ತು ಸೇವಾ ನಿರತರಲ್ಲದ ಅಭ್ಯರ್ಥಿಗಳ ಸೀಟು ಹಂಚಿಕೆಯ ಫಲಿತಾಂಶ ಇದಾಗಿದೆ. ಅಂತಿಮ ಫಲಿತಾಂಶವನ್ನು ಫೆ.26 ರಂದು ಪ್ರಕಟಿಸಲಿದೆ ಎಂದು
ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೀಟು ಹಂಚಿಕೆಯಾದವರು ಮಾರ್ಚ್ 3ರೊಳಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಮಾರ್ಚ್ 4ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.