‘ವಿಶ್ವ ಪವನ ದಿನ–2025’ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಶಸ್ತಿ ಸ್ವೀಕರಿಸಿದರು. ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತ ಮತ್ತಿತರರು ಹಾಜರಿದ್ದರು
ಬೆಂಗಳೂರು: 2024-25ನೇ ಸಾಲಿನಲ್ಲಿ ರಾಜ್ಯದ ವಿದ್ಯುತ್ ಜಾಲಕ್ಕೆ 1331.48 ಮೆಗಾವಾಟ್ ಪವನ ವಿದ್ಯುತ್ ಸೇರ್ಪಡೆ ಮಾಡುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನಗಳಿಸಿದ್ದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
‘ವಿಶ್ವ ಪವನ ದಿನ–2025’ ಸಮಾರಂಭದಲ್ಲಿ ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಶಸ್ತಿ ಸ್ವೀಕರಿಸಿದರು.
1331.48 ಮೆಗಾವಾಟ್ ಸೇರ್ಪಡೆ ಮಾಡುವ ಮೂಲಕ ಕರ್ನಾಟಕ ಪ್ರಥಮ ಸ್ಥಾನದಲ್ಲಿದ್ದರೆ ತಮಿಳುನಾಡು( 1136.37 ಮೆಗಾವಾಟ್) ಎರಡನೇ ಸ್ಥಾನ ಗುಜರಾತ್( 954.74 ಮೆಗಾವಾಟ್) ಮೂರನೇ ಸ್ಥಾನದಲ್ಲಿದೆ. ಕಳೆದ ಸಾಲಿನಲ್ಲಿ ಗುಜರಾತ್ ಪ್ರಥಮ ಕರ್ನಾಟಕ ಎರಡನೇ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.