ADVERTISEMENT

ಹರ್ಷ ಹತ್ಯೆ ಪ್ರಕರಣ: ಒಟ್ಟು ಎಂಟು ಮಂದಿ ಆರೋಪಿಗಳು ಪೊಲೀಸರ ವಶಕ್ಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಫೆಬ್ರುವರಿ 2022, 6:22 IST
Last Updated 23 ಫೆಬ್ರುವರಿ 2022, 6:22 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು:‘ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಆರು ಮಂದಿಯನ್ನು ಬಂಧಿಸಲಾಗಿತ್ತು. ಇಂದು ಮತ್ತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಸೋಮವಾರ ಪ್ರಕರಣದ ಪ್ರಮುಖ ಆರೋಪಿಗಳಾದ ಖಾಸಿಫ್‌, ಸೈಯ್ಯದ್‌ ನದೀಂ ಅವರನ್ನು ಪೊಲೀಸರು ಬಂಧಿಸಿದ್ದರು.

ADVERTISEMENT

ಶಿವಮೊಗ್ಗ ಕ್ಲಾರ್ಕ್‌ ಪೇಟೆಯ ರಿಹಾನ್‌ ಶರೀಫ್‌, ಆಸಿಫ್‌ ಉಲ್ಲಾಖಾನ್‌, ಮುರಾದ್‌ನಗರದ ನಿಹಾನ್‌, ಟ್ಯಾಂಕ್‌ಮೊಹಲ್ಲಾದ ಅಬ್ದುಲ್‌ ಅಫಾನ್‌ ಬಂಧಿತ ಆರೋಪಿಗಳು.

ಪರಿಸ್ಥಿತಿ ಶಾಂತಿಯುತವಾಗಿದೆ: ಡಾ.ಕೆ.ತ್ಯಾಗರಾಜನ್
ಶಿವಮೊಗ್ಗದಲ್ಲಿ ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ, ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕೆಲವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದೇವೆ. ತನಿಖೆ ನಡೆಸಲಾಗುತ್ತಿದೆ. ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಪೂರ್ವ ವಲಯದ ಡಿಐಜಿ ಡಾ.ಕೆ.ತ್ಯಾಗರಾಜನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.