ADVERTISEMENT

ಸುಳ್ಳು ಸಂದೇಶ ಪತ್ತೆಗಾಗಿ ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಆರಂಭಿಸಿದ ರಾಜ್ಯ ಪೊಲೀಸ್

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2020, 9:46 IST
Last Updated 9 ಏಪ್ರಿಲ್ 2020, 9:46 IST
ಫ್ಯಾಕ್ಟ್‌ಚೆಕ್ ವೆಬ್‌ಸೈಟ್
ಫ್ಯಾಕ್ಟ್‌ಚೆಕ್ ವೆಬ್‌ಸೈಟ್   

ಬೆಂಗಳೂರು: ಕೊರೊನಾ ವೈರಸ್ ಬಗ್ಗೆ ಫೇಕ್ ಸಂದೇಶ, ವೈರಸ್ ಹರಡುತ್ತಿದ್ದಾರೆ ಎಂದು ನಿರ್ದಿಷ್ಟ ಸಮುದಾಯವನ್ನು ದೂಷಿಸುವುದಕ್ಕಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಆಗುವ ಫೋಟೊ, ವಿಡಿಯೊಗಳ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವುದಕ್ಕಾಗಿ ಕರ್ನಾಟಕ ರಾಜ್ಯ ಪೊಲೀಸರು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಫ್ಯಾಕ್ಟ್‌ಚೆಕ್ ವಿಭಾಗ ಆರಂಭಿಸಿದ್ದಾರೆ.

ವಿವಾದಾತ್ಮಕವಿಡಿಯೊ, ಫೋಟೊ, ಪೋಸ್ಟ್ ಅಥವಾ ಸಂದೇಶಗಳು ನಿಜವೋ ಅಥವಾ ಸುಳ್ಳೋ ಎಂದು ತಿಳಿಯಲು ಜನರು factcheck.ksp.gov.in ಗೆ ಭೇಟಿ ನೀಡಬಹುದು. ಈ ಬಗ್ಗೆ ಡಿಜಿಪಿಯವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT