ADVERTISEMENT

ಪಕ್ಷೇತರ ಶಾಸಕರ ಅರ್ಜಿ ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2019, 6:44 IST
Last Updated 25 ಜುಲೈ 2019, 6:44 IST
   

ನವದೆಹಲಿ: ಪಕ್ಷೇತರ ಶಾಸಕರು ಸಲ್ಲಿಸಿದ್ದಅರ್ಜಿ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ.

ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಂಡ ಕಾರಣಅತೃಪ್ತರ ಪರ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿಅವರನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್‌ ತರಾಟೆಗೆ ತೆಗೆದುಕೊಂಡರು.

‘ನಿಮಗೆ ಬೇಕಾದಾಗ ನಾವು ಹಗಲು ರಾತ್ರಿ ವಿಚಾರಣೆ ನಡೆಸಬೇಕು. ನಾವು ಕರೆದಾಗ ನೀವು ಬರುವುದಿಲ್ಲ’ಎಂದು ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ ಪ್ರಕರಣ ಇತ್ಯರ್ಥಕ್ಕೆ ಒಪ್ಪಿಗೆ ನೀಡಿದೆ.

ADVERTISEMENT

‘ಅರ್ಜಿ ವಾಪಾಸ್ ಪಡೆಯುವುದಾದರೆ ಅಭ್ಯಂತರವಿಲ್ಲ’
ಪಕ್ಷೇತರ ಶಾಸಕರು ಸಲ್ಲಿಸಿರುವ ಅರ್ಜಿಯನ್ನು ವಾಪಾಸ್ ಪಡೆಯುವುದಾದರೆ ನಮ್ಮ ಅಭ್ಯಂತರವಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ತಿಳಿಸಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿ ಇಂದು ಆದೇಶ ನೀಡುವುದಾಗಿ ನ್ಯಾಯಪೀಠ ತಿಳಿಸಿದೆ.

ತ್ವರಿತವಾಗಿ ವಿಶ್ವಾಸಮತ ಯಾಚನೆ‌ ಆಗಲಿ ಎಂದು ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಸುಪ್ರೀಂಕೋರ್ಟ್‌ ಮೊರೆ‌ ಹೋಗಿದ್ದ‌ರು.

ಬುಧವಾರ ಅರ್ಜಿ ಹಿಂಪಡೆಯುವುದಾಗಿ ಪಕ್ಷೇತರ ಶಾಸಕರ ಪರ ವಕೀಲರು ಕೋರ್ಟ್‌ಗೆ ತಿಳಿಸಿದ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.