ADVERTISEMENT

ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌ 

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 5:41 IST
Last Updated 24 ಜುಲೈ 2019, 5:41 IST
   

ನವದೆಹಲಿ: ಕರ್ನಾಟಕ ವಿಧಾನಸಭೆಯಲ್ಲಿ ನಿನ್ನೆ ವಿಶ್ವಾಸಮತ ಯಾಚನೆ ನಡೆದ ಹಿನ್ನೆಲೆಯಲ್ಲಿ ಕಾಲಮಿತಿಯೊಳಗೆ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಇಂದೇಸುಪ್ರೀಂಕೋರ್ಟ್‌ ವಿಲೇವಾರಿ ಮಾಡುವ ಸಾಧ್ಯತೆ ಇದೆ.

ಅತೃಪ್ತರ ಪರ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಇಂದು ಸುಪ್ರೀಂಕೋರ್ಟ್‌ಗೆ ಬರಲಿಲ್ಲ. ಕಲಾಪ ಆರಂಭವಾಗುತ್ತಿದ್ದಂತೆ ‘ರೋಹಟಗಿ ಎಲ್ಲಿ? ಸಿಂಘ್ವಿ ಎಲ್ಲಿ? ನಾವು ಅವರ ಉಪಸ್ಥಿತಿಯಲ್ಲಿ ತೀರ್ಪು ಪ್ರಕಟಿಸುತ್ತೇವೆ’ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದರು.

‘ಶೀಘ್ರ ವಿಶ್ವಾಸಮತ ಯಾಚನೆಗೆ ಸ್ಪೀಕರ್‌ಗೆ ನಿರ್ದೇಶನ ನೀಡಬೇಕು’ ಎಂದು ಮುಕುಲ್ ರೋಹಟಗಿ ಪಕ್ಷೇತರ ಶಾಸಕರ ಪರ ಅರ್ಜಿ ಸಲ್ಲಿಸಿದ್ದರು. ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ದರು.

ADVERTISEMENT

ಅರ್ಜಿಯ‌ ಉದ್ದೇಶ ಈಡೇರಿದ್ದರಿಂದ ವಕೀಲರು ಕೋರ್ಟ್‌ಗೆ ಬಂದಿರಲಿಲ್ಲ. ಹಿರಿಯ ವಕೀಲರು ಬಂದಾಗಲೇ ಪ್ರಕರಣದ ವಿಚಾರಣೆ ನಡೆಸಿದರಾಯಿತು ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿತು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.