ಬೆಂಗಳೂರು: ‘ಮುಂದಿನ ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಾಶ್ವತವಾಗಿ ನಿರುದ್ಯೋಗಿಯಾಗಲಿದ್ದಾರೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಇತ್ತೀಚೆಗೆ ನಡೆದ ಪಾಲಿಕೆ ಚುನಾವಣೆಯ ಫಲಿತಾಂಶವನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ದೊಡ್ಡಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪರವಾದ ಫಲಿತಾಂಶ ಬಂದಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಡಿಕೆಶಿ ಮತ್ತು ಸಿದ್ದರಾಮಯ್ಯ ಶಾಶ್ವತವಾಗಿ ನಿರುದ್ಯೋಗಿಯಾಗಲಿದ್ದಾರೆ. ಈ ಇಬ್ಬರು ನಾಯಕರು ಅಧಿಕಾರವಿಲ್ಲದೆ ಕೊನೆಯವರೆಗೂ ಟಾಂಗಾ ಗಾಡಿಯಲ್ಲಿ ನಡೆದಾಡಬೇಕಿದೆ’ ಎಂದು ಕಿಡಿಕಾರಿದೆ.
‘ರಾಜ್ಯದಲ್ಲಿ ಮುಂದೆ ನಡೆಯಲಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಮುಂದಡಿ ಇಡುತ್ತೇವೆ’ ಎಂದು ಬಿಜೆಪಿ ಮತ್ತೊಂದು ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.