ADVERTISEMENT

ಪೊಲೀಸ್ ಕಮಿಷನರ್‌ ಕುರಿತ ಡಿಕೆಶಿ ಹೇಳಿಕೆಗೆ ಗೃಹ ಸಚಿವ ಬೊಮ್ಮಯಿ ಖಂಡನೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 16:00 IST
Last Updated 20 ಆಗಸ್ಟ್ 2020, 16:00 IST
ಡಿ.ಕೆ. ಶಿವಕುಮಾರ್ ಹಾಗೂ ಬಸವರಾಜ ಬೊಮ್ಮಾಯಿ
ಡಿ.ಕೆ. ಶಿವಕುಮಾರ್ ಹಾಗೂ ಬಸವರಾಜ ಬೊಮ್ಮಾಯಿ    

ಬೆಂಗಳೂರು: ಕೆ.ಜಿ. ಹಳ್ಳಿ, ಡಿ.ಜೆ ಹಳ್ಳಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆ ಕುರಿತಾಗಿ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಡಿ.ಕೆ.ಶಿವಕುಮಾರ್‌ ಅವರು ದಕ್ಷ ಪೋಲಿಸ್‌ ಕಮಿಷನರ್‌ ಆದ ಕಮಲ್‌ ಪಂಥ್ ಕುರಿತು ಏಜೆಂಟ್ ಎಂದು ನೀಡಿರುವ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಗಲಭೆಕೋರರನ್ನು ಪರೋಕ್ಷವಾಗಿ ರಕ್ಷಣೆ ಮಾಡುವ ಮತ್ತೊಂದು ತಂತ್ರವಾಗಿದೆ. ಇದು ಯಾವುದು ನಡೆಯುವುದಿಲ್ಲ’ ಎಂದು ಹೇಳಿದ್ದಾರೆ.

‘ಗಲಭೆ ನಡೆಸಿರುವುದು ವಿಡಿಯೊಗಳಲ್ಲಿ ಸ್ಪಷ್ಟವಾಗಿದ್ದು, ಗಲಭೆಕೋರರ ವಿರುದ್ದ ನಿರ್ದಾಕ್ಷಿಣ್ಯವಾಗಿ ಪೋಲಿಸ್ ಕಮಿಷನರ್‌ ಕೈಗೊಂಡ ಕ್ರಮದ ಬಗ್ಗೆ ರಾಜ್ಯದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೋಲಿಸರನ್ನು ಏಜೆಂಟರನ್ನಾಗಿ ನಡೆಸಿಕೊಳ್ಳುವುದು ಅವರ (ಕಾಂಗ್ರೆಸ್‌) ಸಂಸ್ಕೃತಿ, ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆಯನ್ನು ಮಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.