ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಪಕ್ಷವು ತಮ್ಮನ್ನು ಬದಲಿಸುವುದಿಲ್ಲ ಎಂದು ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ದೆಹಲಿಯಿಂದ ವಾಪಸ್ ಆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನನ್ನನ್ನು ಬದಲಾವಣೆ ಮಾಡಬಹುದು ಎಂಬ ಭ್ರಮೆಯಲ್ಲಿ ಇರುವವರಿಗೆ ಒಳ್ಳೆಯ ಬುದ್ದಿ ಬರಲು ಸಾಧ್ಯವೇ ಇಲ್ಲ’ ಎಂದರು.
‘ಯತ್ನಾಳರನ್ನು ಉಚ್ಚಾಟನೆ ಮಾಡುವಂತೆ ದೂರು ಕೊಡುತ್ತಿಲ್ಲ; ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ದಿನನಿತ್ಯ ಬೀದಿಯಲ್ಲಿ ಮಾತನಾಡುತ್ತಿದ್ದು, ಪತ್ರಿಕೆಗಳಲ್ಲೂ ಬರುತ್ತಿದೆ. ಅವೆಲ್ಲ ಬಹಳ ದಿನ ಮುಂದುವರೆಯುವುದಿಲ್ಲ. ವರಿಷ್ಠರು ಅವರದೇ ಆದ ರೀತಿಯಲ್ಲಿ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ’ ಎಂದರು.
‘ನನ್ನ ಕೆಲಸದ ಬಗ್ಗೆ ವರಿಷ್ಠರಿಗೆ ಸಮಾಧಾನ ಇದೆ. ಯಡಿಯೂರಪ್ಪ ಅವರ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಮಾತನಾಡುತ್ತಿರುವವರಿಗೆ ಮುಂದಿನ ದಿನಗಳಲ್ಲಿ ಉತ್ತರ ಕೊಡುತ್ತೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.