
ಹೊಸಪೇಟೆ (ವಿಜಯನಗರ): ಕಾಂಗ್ರೆಸ್ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ಸಭೆಯ ವೇಳೆ ನಾವೆಲ್ಲ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದೆವು. ಆಗ ಇಂತಿಷ್ಟು ಸಮಯಕ್ಕೆ ಸಿಎಂ ಎಂಬ ಷರತ್ತು ಇರಲಿಲ್ಲ, ಸದ್ಯಕ್ಕಂತೂ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಇಲ್ಲಿಗೆ ಸಮೀಪದ ಬೈಲವದ್ದಿಗೇರಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಲ್‌ಪಿ ಸಭೆಯ ಹೊರತಾಗಿ ಪಕ್ಷದ ವರಿಷ್ಠರು ಅಧಿಕಾರ ಹಂಚಿಕೆ ಬಗ್ಗೆ ಹೇಳಿದ್ದರೆ ಅದು ನನಗೆ ಗೊತ್ತಿಲ್ಲ, ಅದರ ಬಗ್ಗೆ ವರಿಷ್ಠರೇ ಹೇಳುತ್ತಾರೆ ಎಂದರು.
‘ನಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಿಎಂ, ಡಿಸಿಎಂ ಇಬ್ಬರೂ ಹೇಳಿದ್ದಾರೆ. ವರಿಷ್ಠರ ಸೂಚನೆಯಂತೆ ನಡೆದುಕೊಳ್ಳುವುದಾಗಿ ಹೇಳಿದ್ದಾರೆ. ಕಾಂಗ್ರೆಸ್‌ನ ಯಾವ ಶಾಸಕರೂ ಮಾರಾಟಕ್ಕಿಲ್ಲ, ಬರೀ ಬೆಂಕಿ ಹಚ್ಚುವುದಷ್ಟೇ ಬಿಜೆಪಿ ಕೆಲಸ’ ಎಂದರು.
ಸೋನಿಯಾ ಇಲ್ಲದಿದ್ದರೆ...: ಸೋನಿಯಾ ಗಾಂಧಿ ಅವರು ಪಕ್ಷದ ಚುಕ್ಕಾಣಿ ಹಿಡಿಯದೆ ಇದ್ದಿದ್ದರೆ ಬಿಜೆಪಿಯವರು ಹೇಳುತ್ತಿರುವಂತೆ ದೇಶ ಎಂದೋ ಕಾಂಗ್ರೆಸ್ ಮುಕ್ತ ಆಗಿಬಿಟ್ಟಿರುತ್ತಿತ್ತು ಎಂದು ಕೆ.ಜೆ.ಜಾರ್ಜ್ ಅವರು ಇದಕ್ಕೆ ಮೊದಲು ನಡೆದ ಸಮಾರಂಭದಲ್ಲಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.