ADVERTISEMENT

₹4,008 ಕೋಟಿ ಪೂರಕ ಅಂದಾಜು ಮಂಡನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 20:51 IST
Last Updated 23 ಸೆಪ್ಟೆಂಬರ್ 2020, 20:51 IST
ವಿಧಾನಮಂಡಲ ಅಧಿವೇಶನದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸದಸ್ಯರಿಗೆ ಅಭಿನಂಧಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರು ಹಾಜರಿದ್ದರು
ವಿಧಾನಮಂಡಲ ಅಧಿವೇಶನದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸದಸ್ಯರಿಗೆ ಅಭಿನಂಧಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರು ಹಾಜರಿದ್ದರು   

ಬೆಂಗಳೂರು: 2020–21ನೇ ಸಾಲಿನ ₹4,008 ಕೋಟಿಯ (ಮೊದಲ ಕಂತು) ಪೂರಕ ಅಂದಾಜನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯಕೀಯ ಸಂಸ್ಥೆಗಳಲ್ಲಿ ಕೋವಿಡ್‌ ನಿರ್ವಹಣೆಗಾಗಿ ಐಸಿಯು ಉಪಕರಣಗಳ ಖರೀದಿ, ಎನ್‌–95 ಮಾಸ್ಕ್‌, ಪಿಪಿಇ ಕಿಟ್‌ ಹಾಗೂ ಅವಶ್ಯಕ ಸಾಮಗ್ರಿಗಳ ಖರೀದಿಗಾಗಿ ₹136 ಕೋಟಿ, ವೈದ್ಯಕೀಯ ಸಂಸ್ಥೆಗಳಲ್ಲಿ ಮೆಡಿಕಲ್‌ ಗ್ಯಾಸ್‌ ಪೈಪ್‌ಲೈನ್‌ ಹಾಗೂ ಎಲ್‌ಎಂಒ ಪ್ಲಾಂಟ್‌ ನಿರ್ಮಾಣ ಕಾಮಗಾರಿಗಾಗಿ ₹29.80 ಕೋಟಿ, ಉಪಕರಣ, ಔಷಧಿ, ವೆಂಟಿಲೇಟರ್‌ಗಳ ಖರೀದಿಗಾಗಿ ಆರೋಗ್ಯ ಇಲಾಖೆಗೆ ₹10.90 ಕೋಟಿ ಹಂಚಿಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT