ADVERTISEMENT

ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ; ವರಿಷ್ಠರು ಹೇಳಿದಂತೆ ನಡೆಯುವೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 16:07 IST
Last Updated 28 ನವೆಂಬರ್ 2025, 16:07 IST
   

ಬೆಂಗಳೂರು: 'ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಬೆಂಗಳೂರಿನಲ್ಲಿ ಅವರು ಇಂದು (ಶುಕ್ರವಾರ) ಮಾಧ್ಯಮದವರೊಂದಿಗೆ ಮಾತನಾಡಿದರು.

ಉಪಾಹಾರಕ್ಕೆ ಆಹ್ವಾನ

ADVERTISEMENT

'ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ' ಎಂದರು.

ಆಹ್ವಾನ ಬಂದರೆ ದೆಹಲಿಗೆ ತೆರಳುವೆ

ನವದೆಹಲಿಗೆ ಕರೆದರೆ ತೆರಳುವುದಾಗಿ ಮುಖ್ಯಮಂತ್ರಿಗಳು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.