ADVERTISEMENT

ಬಿಜೆಪಿಯಿಂದ ಹಣ ಹಂಚಿಕೆ | ಐಟಿ, ಇಡಿ ಸಂಸ್ಥೆ ಏನು ಮಾಡುತ್ತಿವೆ: ಕಾಂಗ್ರೆಸ್‌

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 12:00 IST
Last Updated 13 ಏಪ್ರಿಲ್ 2021, 12:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗಳಲ್ಲಿ ಬಿಜೆಪಿ ಭ್ರಷ್ಟಾಚಾರದ ಹಣದ ಹೊಳೆಯನ್ನು ಹರಿಸುತ್ತಿದೆ’ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪಗಳಿಗೆ ಪುಷ್ಠಿ ನೀಡುವಂತೆ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣಾ ಕ್ಷೇತ್ರಗಳಲ್ಲಿ ಬಿಜೆಪಿ ಭ್ರಷ್ಟಾಚಾರದ ಹಣದ ಹೊಳೆಯನ್ನು ಹರಿಸುತ್ತಿದೆ. ಆದರೆ. ಐಟಿ, ಇಡಿ ಸಂಸ್ಥೆಗಳು ಏನು ಮಾಡುತ್ತಿವೆ?’ ಎಂದು ಪ್ರಶ್ನಿಸಿದೆ.

‘ಭ್ರಷ್ಟಾಚಾರದ ಈ ಹಣ ಎಲ್ಲಿಂದ ಬಂತು?, ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿರುವುದೇಕೆ? ಆಡಳಿತ ಪಕ್ಷದ ಶಾಸಕರ ಈ ಆರೋಪ ಗಂಭೀರ ಎನಿಸಲಿಲ್ಲವೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ADVERTISEMENT

‘ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ!, ಹಣದಿಂದ ಶಾಸಕರನ್ನೂ ಖರೀದಿಸುತ್ತದೆ. ಮತಗಳನ್ನೂ ಖರೀದಿಸುತ್ತದೆ. ಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ ವಿಡಿಯೋ ಇದು. ಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸಿದ್ದು, ಜಗತ್ತಿಗೆ ತಿಳಿದರೂ ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ?’ ಎಂದು ಕಾಂಗ್ರೆಸ್‌ ಟೀಕಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.