ADVERTISEMENT

ಅವಸಾನದ ಅಂಚಿನಲ್ಲಿ ರಾಮನಾಮ ಜಪಿಸುತ್ತಿರುವ ಕಾಂಗ್ರೆಸ್: ಬಿಜೆಪಿ ತಿರುಗೇಟು

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 14:51 IST
Last Updated 30 ಮಾರ್ಚ್ 2021, 14:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಅವಸಾನದ ಅಂಚಿನಲ್ಲಿ ಕಾಂಗ್ರೆಸ್ ಪಕ್ಷವು ರಾಮನಾಮ ಜಪಿಸುತ್ತಿದೆ ಎಂದು ಬಿಜೆಪಿ ಮಂಗಳವಾರ ತಿರುಗೇಟು ನೀಡಿದೆ.

ಬಿಜೆಪಿಯವರು ‘ಜೈ ಶ್ರೀರಾಮ್’ ಎಂದರೆ ಸ್ವತಃ ರಾಮನೇ ಅಸಹ್ಯಪಟ್ಟುಕೊಳ್ಳುತ್ತಾನೆ ಎಂಬ ಕಾಂಗ್ರೆಸ್‌ ಟೀಕೆಗೆ ತಿರುಗೇಟು ನೀಡಿ ಟ್ವೀಟ್‌ ಮಾಡಿರುವ ಬಿಜೆಪಿ, ಕಾಂಗ್ರೆಸ್‌ಗೆ ಇದ್ದಕ್ಕಿದ್ದಂತೆಯೇ ರಾಮಭಕ್ತಿ ಬರಲು ಕಾರಣವೇನು ಎಂದು ಪ್ರಶ್ನಿಸಿದೆ.

‘ಕಾಂಗ್ರೆಸ್ ಅವಸಾನದ ಅಂಚಿನಲ್ಲಿ ರಾಮನಾಮ ಜಪಿಸುತ್ತಿದೆ.ರಾಮಸೇತು ಒಡೆಯಲು ಯತ್ನಿಸಿದರು, ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸಿದರು, ಜೈ ಶ್ರೀರಾಮ್‌ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿದರು, ಇಷ್ಟೆಲ್ಲಾ ಮಾಡಿರುವ ಕಾಂಗ್ರೆಸ್‌ ಪಕ್ಷಕ್ಕೆ ಇದ್ದಕ್ಕಿದ್ದಂತೆಯೇ ರಾಮಭಕ್ತಿ ಬರಲು ಕಾರಣವೇನು?’ ಎಂದು ಕರ್ನಾಟಕ ಬಿಜೆಪಿಯ ಅಧಿಕೃತ ಟ್ವಿಟರ್‌ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಸರಣಿ ಟ್ವೀಟ್‌ ಮಾಡಿದ್ದ ಕಾಂಗ್ರೆಸ್‌, ‘ಬಿಜೆಪಿಗರು ‘ಜೈ ಶ್ರೀರಾಮ್’ ಎಂದರೆ ಸ್ವತಃ ರಾಮನೇ ಅಸಹ್ಯಪಟ್ಟುಕೊಳ್ಳುತ್ತಾನೆ. ರಾಮನ ಹೆಸರಲ್ಲಿ ಬಿಜೆಪಿ ಸರ್ಕಾರ ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ’ ಎಂದು ಟೀಕಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.