ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ್‌ ಸಿಂಗ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜುಲೈ 2023, 10:32 IST
Last Updated 28 ಜುಲೈ 2023, 10:32 IST
   

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹಾಗೂ ಅವರ ಪತ್ನಿ ಅಮೃತಾ ರೈ ಅವರು ಇಂದು (ಶುಕ್ರವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳ ಕಚೇರಿ, ‘ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕರಾದ ದಿಗ್ವಿಜಯ್‌ ಸಿಂಗ್‌ ಹಾಗೂ ಅವರ ಪತ್ನಿ ಅಮೃತಾ ರೈ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ’ ಎಂದು ತಿಳಿಸಿದೆ.

‘ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು’ ಎಂದು ಸಿಎಂ ಕಚೇರಿ ತಿಳಿಸಿದೆ.

ADVERTISEMENT

ಇದನ್ನೂ ಓದಿ.... ದೆಹಲಿ: ರಾಡ್‌ನಿಂದ ಹಲ್ಲೆ, 25 ವರ್ಷದ ವಿದ್ಯಾರ್ಥಿನಿ ಬರ್ಬರ ಹತ್ಯೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.