ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್
(ಚಿತ್ರ ಕೃಪೆ: X/@siddaramaiah)
ಬೆಂಗಳೂರು: 'ನನ್ನ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಯಾವುದೇ ವೈಮನಸ್ಸು ಇಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
'ಈ ಸರ್ಕಾರವು ಐದು ವರ್ಷ ಬಂಡೆಯಷ್ಟೇ ಭದ್ರವಾಗಿರುತ್ತದೆ' ಎಂದು ಅವರು ಹೇಳಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆ ಕೈ ಹಿಡಿದು ಸಿದ್ದರಾಮಯ್ಯ ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, 'ನನ್ನ ಹಾಗೂ ಡಿಕೆಶಿ ನಡುವೆ ಯಾವುದೇ ಭಿನ್ನಾಭಿಪ್ರಾಯನೂ ಇಲ್ಲ. ನಾವಿಬ್ಬರೂ ಚೆನ್ನಾಗಿದ್ದೇವೆ' ಎಂದು ತಿಳಿಸಿದ್ದಾರೆ.
'ಜನರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ಕೊಡುವುದು ಸಾಧನೆಯಲ್ಲ, ನಮ್ಮ ಹೊಣೆಯೆಂದು ತಿಳಿದು ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ' ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.