
ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನೆಲೆಗೆ ಬಂದಿರುವ ನಡುವೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 'ಎಲ್ಲ 140 ಮಂದಿ ಶಾಸರೂ ನನ್ನವರೇ. ಗುಂಪುಗಾರಿಕೆ ಮಾಡುವುದು ನನ್ನ ರಕ್ತದಲ್ಲಿಯೇ ಇಲ್ಲ' ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಸಂಪುಟ ಪುನರ್ ರಚನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಸಚಿವ ಸ್ಥಾನಕ್ಕೆ ಎಲ್ಲರೂ ಆಕಾಂಕ್ಷಿಗಳೇ. ಹಾಗಾಗಿ ಅವರು ದೆಹಲಿಗೆ ಹೋಗಿ ನಾಯಕರನ್ನು ಭೇಟಿಯಾಗುವುದು ಸಹಜ. ಅದು ಅವರ ಹಕ್ಕು ಆಗಿದ್ದು, ತಡೆಯಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.
'ಐದು ವರ್ಷಗಳನ್ನು ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಅವರಿಗೆ ನಾನು ಶುಭ ಹಾರೈಸುತ್ತೇನೆ. ನಾವೆಲ್ಲರೂ ಅವರೊಂದಿಗೆ ಕೆಲಸ ಮಾಡುತ್ತೇವೆ' ಎಂದು ಹೇಳಿದ್ದಾರೆ.
'ಹೈಕಮಾಂಡ್ ನಿರ್ಧಾರಕ್ಕೆ ನಾನು ಹಾಗೂ ಸಿಎಂ ಬದ್ಧರಾಗಿರುವುದಾಗಿ ಹಲವು ಸಲ ಸ್ಪಷ್ಟಪಡಿಸಿದ್ದೇವೆ' ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.