
ಬೀದರ್: ‘ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ. ಅವರ ಗೋಜಿಗೆ ನಾವು ಹೋಗುವುದಿಲ್ಲ. ಏನಾದರೂ ಆಗಿ ಸರ್ಕಾರ ಬಿದ್ದರೆ ಬಿಜೆಪಿ ಚುನಾವಣೆಗೆ ಹೋಗುತ್ತದೆ’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದರು.
‘ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಲು ಕಾಂಗ್ರೆಸ್ ಶಾಸಕರ ಸೆಳೆಯಲು ಕೋಟಿಗಟ್ಟಲೇ ವ್ಯವಹಾರ ನಡೆಯುತ್ತಿದೆ. ಈಗಾಗಲೇ ಜೈಲಿನಲ್ಲಿರುವ ಇಬ್ಬರು ಶಾಸಕರನ್ನು ಭೇಟಿ ಮಾಡಿದ್ದಾರೆ. ಬಿಜೆಪಿ ಯಾವುದೇ ರೀತಿಯ ಆಪರೇಷನ್ ನಡೆಸುತ್ತಿಲ್ಲ. ನಮ್ಮ ಯಾವ ಶಾಸಕರೂ ಕಾಂಗ್ರೆಸ್‌ಗೆ ಹೋಗೊಲ್ಲ. ಅವರು ಕೂಡ ನಮ್ಮ ಶಾಸಕರನ್ನು ಸಂಪರ್ಕಿಸಿಲ್ಲ. ಕಾಂಗ್ರೆಸ್ ಪಕ್ಷದಲ್ಲಿರುವ ಶಾಸಕರನ್ನು ಸೆಳೆಯುವುದಕ್ಕಾಗಿ ಆಪರೇಷನ್ ನಡೆಸುತ್ತಿದ್ದಾರೆ. ಇದಕ್ಕಾಗಿ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಸಿಎಂ ಕುರ್ಚಿ ಜಗಳದಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.