ADVERTISEMENT

Karnataka Politics | ಸಿದ್ದರಾಮಯ್ಯ ನಾನು ಒಟ್ಟಿಗೆ ಇರುತ್ತೇವೆ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 15:51 IST
Last Updated 12 ನವೆಂಬರ್ 2025, 15:51 IST
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್   

ಬೆಂಗಳೂರು: ‘ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾರೆ. ನಾವೂ ಅವರ ಜತೆಯಲ್ಲೇ ಕೆಲಸ ಮಾಡುತ್ತಿದ್ದೇವೆ. ಮುಂದೆಯೂ ಒಟ್ಟಿಗೆ ಇರುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. 

‘ಡಿ.ಕೆ.ಶಿವಕುಮಾರ್‌ 2028ಕ್ಕೆಮುಖ್ಯಮಂತ್ರಿ ಆಗಬೇಕು, ಅಲ್ಲಿಯವರೆಗೆ ಸಿದ್ದರಾಮಯ್ಯ ಅವರೇ ಇರುತ್ತಾರೆ. ಈ ಮಾತನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆ ಮುಂದೆ ನಿಂತು ಹೇಳುತ್ತೇನೆ’ ಎಂಬ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ಹೇಳಿಕೆ ಕುರಿತು ಅವರು ಪ್ರತಿಕ್ರಿಯಿಸಿದರು.

‘ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಜವಾಬ್ದಾರಿ. ಈ ಕುರಿತು ನನ್ನ ಬಳಿ ಚರ್ಚೆ ಮಾಡಿಲ್ಲ. ನ.15ರಂದು ದೆಹಲಿಗೆ ತೆರಳುತ್ತಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಕಪಿಲ್‌ ಸಿಬಲ್‌ ಕಾರ್ಯಕ್ರಮಕ್ಕಾಗಿ ನಾನೂ ಹೋಗುತ್ತಿದ್ದೇನೆ’ ಎಂದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.