ADVERTISEMENT

ಅಣ್ಣನ ಹಣೆಯಲ್ಲಿ ಬರೆದಿದ್ದರೆ CM ಆಗುತ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 23:30 IST
Last Updated 29 ಅಕ್ಟೋಬರ್ 2025, 23:30 IST
ಡಿ.ಕೆ. ಸುರೇಶ್
ಡಿ.ಕೆ. ಸುರೇಶ್   

ಬೆಂಗಳೂರು: ‘ಅಣ್ಣನ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ’ ಎಂದು  ಡಿ.ಕೆ. ಶಿವಕುಮಾರ್ ಅವರ ಸಹೋದರ, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಅಣ್ಣ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ. ಪಕ್ಷ ಹೇಳಿದಂತೆ ಅಣ್ಣ ನಡೆದುಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ, ಉಪ ಮುಖ್ಯಮಂತ್ರಿಯಾಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬರದಂತೆ, ಪಕ್ಷನಿಷ್ಠರಾಗಿದ್ದಾರೆ. ಪಕ್ಷದ ಅಧ್ಯಕ್ಷರಾಗಿ ಎಲ್ಲರನ್ನೂ ಸಮಾನವಾಗಿ ನೋಡಬೇಕಿರುವುದು ಅವರ ಕರ್ತವ್ಯ’ ಎಂದು ಹೇಳಿದರು.

‘ನವೆಂಬರ್ 15ರ ನಂತರ ಸರ್ಕಾರದಲ್ಲಿ ಏನಾದರೂ ಬದಲಾವಣೆ ಆಗುತ್ತದೆಯೇ’ ಎಂಬ ಪ್ರಶ್ನೆಗೆ, ‘ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ, ಎಐಸಿಸಿ ನಾಯಕರಿಗೆ ಕೇಳಬೇಕು’ ಎಂದರು.

ADVERTISEMENT

2028ಕ್ಕೆ ಸಿದ್ದರಾಮಯ್ಯ ಅವರ ಸ್ಪರ್ಧೆ ತಪ್ಪಲ್ಲ: 2028ರ ಚುನಾವಣೆಗೂ ಸಿದ್ದರಾಮಯ್ಯ ಸ್ಪರ್ಧಿಸುವ ಬಗ್ಗೆ ಕೇಳಿದಾಗ, ‘ರಾಜಕೀಯದಲ್ಲಿ 95-98 ವರ್ಷ ಆದವರೂ ಇದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎನ್ನುವುದರಲ್ಲಿ ಯಾವ ತಪ್ಪೂ ಇಲ್ಲ’ ಎಂದರು.

‘ಸಿದ್ದರಾಮಯ್ಯ ಅವರು ಅನಿವಾರ್ಯವೇ’ ಎಂಬ ಪ್ರಶ್ನೆಗೆ, ‘ಒಬ್ಬ ನಾಯಕನಿಗೆ ಇರಬೇಕಾದ ಎಲ್ಲ ಅವಕಾಶಗಳು ಅವರಿಗಿದೆ. ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದ ರಲ್ಲಿ ತಪ್ಪೇನಿಲ್ಲ’ ಎಂದು ಡಿ.ಕೆ ಸುರೇಶ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.