ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಒಬ್ಬ ಶಿಕ್ಷಣ ವಿರೋಧಿ, ಅವಿವೇಕಿ. ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸುವ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಸಿಎಂ ಬಸವರಾಜ ಬೊಮ್ಮಾಯಿ ಅವರ ನಿದ್ದೆ ಬಿಡಿಸಬೇಕಾದರೆ ನಾವು ಎಚ್ಚರಿಸಬೇಕಾಯಿತು ಎಂದು ವಾಗ್ದಾಳಿ ನಡೆಸಿದ್ದಾರೆ.
‘ಬಡ ಶಾಲಾ ಮಕ್ಕಳಿಂದ ಶೂ-ಸಾಕ್ಸ್‌ಗಳನ್ನೂ ಕಿತ್ತುಕೊಳ್ಳಲು ಹೊರಟಿದ್ದ ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಡುತ್ತಿರುವ ಎಡವಟ್ಟುಗಳು ಒಂದೋ, ಎರಡೋ? ಮೊದಲು ಈ ಶಿಕ್ಷಣ ವಿರೋಧಿಯನ್ನು ಸಂಪುಟದಿಂದ ಕಿತ್ತು ಹಾಕಿ’ ಎಂದು ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡದೇ ಇರುವುದರಿಂದ ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸುತ್ತಿದ್ದ ಸೈಕಲ್, ಶೂ, ಸಾಕ್ಸ್ ಯೋಜನೆಗಳನ್ನು ಶಿಕ್ಷಣ ಇಲಾಖೆ ಕೈ ಬಿಟ್ಟಿತ್ತು.
ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕರು ಟೀಕಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ.
ಇವನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.