ಮಾಧುಸ್ವಾಮಿ ಮತ್ತು ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಜೆ.ಸಿ. ಮಾಧುಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿಯಾಗಿ ಚರ್ಚೆ ನಡೆಸಿದರು.
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ಕಾವೇರಿ’ಗೆ ತಮ್ಮ ಆಪ್ತರ ಜತೆ ಭೇಟಿ ನೀಡಿದ ಮಾಧುಸ್ವಾಮಿ ಕೆಲಹೊತ್ತು ಸಮಾಲೋಚನೆ ನಡೆಸಿದರು.
‘ಇದೊಂದು ಸೌಹಾರ್ದ ಭೇಟಿಯಾಗಿತ್ತು’ ಎಂದು ಮುಖ್ಯಮಂತ್ರಿ ಸಚಿವಾಲಯ ಹೇಳಿದೆ.
ಈ ಬಗ್ಗೆ ಪ‍್ರತಿಕ್ರಿಯಿಸಿರುವ ಮಾಧುಸ್ವಾಮಿ, ‘ಭೇಟಿಯಲ್ಲಿ ಯಾವ ರಾಜಕೀಯ ಉದ್ದೇಶವಿರಲಿಲ್ಲ. ಸಮುದಾಯದ ವಿದ್ಯಾರ್ಥಿ ನಿಲಯಕ್ಕೆ ಬೆಂಗಳೂರಿನಲ್ಲಿ ನೀಡಲಾಗಿದ್ದ ನಿವೇಶನಕ್ಕೆ ಸಂಬಂಧಿಸಿ ಚರ್ಚಿಸುವುದಕ್ಕಷ್ಟೇ ಭೇಟಿಯಾಗಿದ್ದೆ’ ಎಂದು ಹೇಳಿದರು.
ವಿಧಾನಸಭೆ ಚುನಾವಣೆಯ ಸೋಲು ಹಾಗೂ ಲೋಕಸಭೆ ಚುನಾವಣೆಯ ವೇಳೆ ನಡೆದ ವಿದ್ಯಮಾನಗಳ ಬಳಿಕ ಮಾಧುಸ್ವಾಮಿ ಅವರು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಈ ಕಾರಣದಿಂದಾಗಿ ರಾಜಕೀಯ ಆಯಾಮ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.