ಡಿ.ಕೆ. ಶಿವಕುಮಾರ್ ಮತ್ತು ಕೆ.ಎನ್. ರಾಜಣ್ಣ
ಬೆಂಗಳೂರು: ‘ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
‘ಇದರಿಂದ ನನಗೂ ನೋವಾಗಿದೆ. ರಾಜಣ್ಣ ಅವರು ನನ್ನ ಒಳ್ಳೆಯ ಸ್ನೇಹಿತರು, ಆಪ್ತರು. 25 ವರ್ಷಗಳಿಂದ ಜೊತೆಯಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ’ ಎಂದರು.
‘ಪಕ್ಷದಿಂದ ಉಚ್ಚಾಟಿಸಬೇಕು ಎಂದು ಹೈಕಮಾಂಡ್‌ನಿಂದ ಸೂಚನೆ ಏನಾದರೂ ಬಂದಿತ್ತೇ’ ಎಂಬ ಪ್ರಶ್ನೆಗೆ, ‘ಶಾಸಕರು ಮತ್ತು ಮಂತ್ರಿಗಳು ನನ್ನ ಕಾರ್ಯವ್ಯಾಪ್ತಿಗೆ ಬರುವುದಿಲ್ಲ. ಶಾಸಕರಾದ ನಂತರ ಪಕ್ಷಕ್ಕೆ ಸಂಬಂಧಪಟ್ಟಂತೆ ಅಶಿಸ್ತು ತೋರಿದರೆ ಸಣ್ಣಪುಟ್ಟ ನೋಟಿಸ್ ನೀಡುವ ಕೆಲಸ ಮಾಡಲಾಗುತ್ತದೆ. ಇದರ ಹೊರತಾಗಿ ಸಿಎಲ್‌ಪಿ ನಾಯಕರೇ (ಸಿದ್ದರಾಮಯ್ಯ) ಮಂತ್ರಿಗಳು ಹಾಗೂ ಶಾಸಕರ ಮೇಲೆ ನಿಯಂತ್ರಣ ಹೊಂದಿರುತ್ತಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.