ADVERTISEMENT

ಕೆಪಿಸಿಸಿಗೆ ನನ್ನನ್ನೇ ಅಧ್ಯಕ್ಷರನ್ನಾಗಿ ಮಾಡಿ ಎಂದು ಕೇಳಿಲ್ಲ‌: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2025, 8:34 IST
Last Updated 15 ಜನವರಿ 2025, 8:34 IST
<div class="paragraphs"><p>ಸಚಿವ ಸತೀಶ ಜಾರಕಿಹೊಳಿ</p></div>

ಸಚಿವ ಸತೀಶ ಜಾರಕಿಹೊಳಿ

   

ಬೆಂಗಳೂರು: 'ಕೆಪಿಸಿಸಿಗೆ ನನ್ನನ್ನೇ ಅಧ್ಯಕ್ಷ ಮಾಡಿ ಎಂದು ಕೇಳಿಲ್ಲ‌. ಆದರೆ, ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ಮಾಡುವಂತೆ ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಹೇಳಿದ್ದೇನೆ' ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ಸುರ್ಜೇವಾಲಾ ಅವರನ್ನು ಭೇಟಿ ಮಾಡಿ

ADVERTISEMENT

ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿಯೂ ಚರ್ಚಿಸಿದ್ದೇನೆ. ನನ್ನ ಅಭಿಪ್ರಾಯವನ್ನೂ ಉಸ್ತುವಾರಿಗೆ ತಿಳಿಸಿದ್ದೇನೆ' ಎಂದರು.

'ಪಕ್ಷಕ್ಕೆ ಮತ ತರುವ ಸಾಮರ್ಥ್ಯ ಇರುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಹೇಳಿದ್ದೇನೆ.‌ ಯಾರನ್ನೇ ಮಾಡಿದರು ಪಕ್ಷ ಸಂಘಟಿಸುವ, ಮತ ತರುವ ಸಾಮರ್ಥ್ಯ ಇರುವವರಿಗೆ ಹುದ್ದೆ ಕೊಡಬೇಕು. ಈ ಬಗ್ಗೆಯೂ ಉಸ್ತುವಾರಿ ಅವರಿಗೆ ವಿವರಿಸಿದ್ದೇನೆ' ಎಂದರು.

'ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಮಾಡಬೇಕು ಎಂದೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಹೇಳಿದ್ದೇನೆ. ಹಾಲಿ ಅಧ್ಯಕ್ಷರನ್ನೇ ಮುಂದುವರಿಸುವುದಾದರೆ ಅದನ್ನೂ ಸ್ಪಷ್ಟಪಡಿಸಿ ಎಂದೂ ಹೇಳಿದ್ದೇನೆ'

'ನಮಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು. ಮತ ತರುವವರನ್ನು. ಜನಪ್ರಿಯತೆ ಇರುವವರನ್ನು ಅಧ್ಯಕ್ಷ ಮಾಡಿ ಎಂದಿದ್ದೇನೆ. ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಇರಬೇಕೇ ಬೇಡವೇ ಎಂಬ ಬಗ್ಗೆ ಗೊಂದಲಗಳಿವೆ. ಹೀಗಾಗಿ ಎಲ್ಲ ಗೊಂದಲಗಳಿಗೆ ಇತಿ ಶ್ರೀ ಹಾಡುವಂತೆ ಸುರ್ಜೆವಾಲಾಗೆ ಹೇಳಿದ್ದೇನೆ. ಡಿ.ಕೆ ಶಿವಕುಮಾರ್ ಅವರನ್ನು ಮುಂದುವರಿಸುವುದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.