ADVERTISEMENT

ಮಗನಿಗೂ ಸವಲತ್ತು ಪಡೆದ ಶಾಸಕ ರೇಣುಕಾಚಾರ್ಯ: ಎಂ.ಲಕ್ಷ್ಮಣ ಆರೋಪ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2022, 19:45 IST
Last Updated 24 ಮಾರ್ಚ್ 2022, 19:45 IST
ಎಂ.ಲಕ್ಷ್ಮಣ
ಎಂ.ಲಕ್ಷ್ಮಣ    

ಮೈಸೂರು: ‘ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ, ಪರಿಶಿಷ್ಟ ಜಾತಿಯ ಹೆಸರಿನಲ್ಲಿ ತಮ್ಮ ಪುತ್ರನ ಶಿಕ್ಷಣಕ್ಕೆ ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ನಿಗಮದಿಂದ ₹ 42 ಲಕ್ಷ ಪಡೆದಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.

‘ಮಗಳು ಪರಿಶಿಷ್ಟ ಜಾತಿ ಹೆಸರಿನಲ್ಲಿ ಪ್ರಮಾಣಪತ್ರ ಪಡೆದಿರುವುದನ್ನು ರೇಣುಕಾಚಾರ್ಯ ಒಪ್ಪಿಕೊಂಡಿದ್ದಾರೆ. ಅವರ ಮಗ ಎಂ.ಆರ್.ಚಂದನ್‌ ಕೂಡ ಪ್ರಮಾಣಪತ್ರ ಪಡೆದಿದ್ದಾರೆ. ಅಮೆರಿಕದಲ್ಲಿ ಎಂಜಿನಿಯರಿಂಗ್‌ ಶಿಕ್ಷಣಕ್ಕಾಗಿ ನಿಗಮದಿಂದ ಹಣ ಪಡೆದಿದ್ದಾರೆ. ಬ್ಯಾಂಕ್‌ ಮೂಲಕ ₹ 80 ಲಕ್ಷ ಪಡೆದುಕೊಂಡಿರುವ ಮಾಹಿತಿಯೂ ಇದೆ. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು’ ಎಂದರು.

‘ಪರಿಶಿಷ್ಟರ ಸೌಲಭ್ಯ ಕಸಿದುಕೊಂಡ ರೇಣುಕಾಚಾರ್ಯ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಬಂಧಿಸಬೇಕು. ರಾಜಕೀಯ ಕಾರ್ಯದರ್ಶಿ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಮೌನವಹಿಸಿರುವುದೇಕೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.