ADVERTISEMENT

ಕಾಂಗ್ರೆಸ್ಸಿಗರೇ, ದಲಿತರಿಗೆ ಮೀಸಲಾತಿ ನೀಡಿದರೆ ಏನು ಸಮಸ್ಯೆ: ಬಿಜೆಪಿ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಅಕ್ಟೋಬರ್ 2022, 7:48 IST
Last Updated 11 ಅಕ್ಟೋಬರ್ 2022, 7:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಹೆಚ್ಚಳ ವಿಚಾರ ಕಾಂಗ್ರೆಸ್‌ –ಬಿಜೆಪಿ ನಡುವೆ ಕೆಸರೆರೆಚಾಟಕ್ಕೆ ಕಾರಣವಾಗಿದೆ.

ಮೀಸಲಾತಿ ಹೆಚ್ಚಳ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್‌ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸರ್ಕಾರ ಮೀಸಲಾತಿ ನಿರ್ಧಾರ ಕೈಗೊಂಡ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನುಮಾನದಭೂತ ಹುಟ್ಟಿಕೊಂಡಿದೆ. ಸರ್ವಪಕ್ಷ ಸಭೆ ಕರೆದು ಮೀಸಲಾತಿ ಹೆಚ್ಚಳ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಗಳನ್ನು ತಿಳಿಯ ಪಡಿಸಲಾಗಿದೆ. ಆದರೂ ಈಗ ಕಾಂಗ್ರೆಸ್ ತಕರಾರು ಎತ್ತುತ್ತಿದೆ’ ಎಂದು ವಾಗ್ದಾಳಿ ನಡೆಸಿದೆ.

‘ಪರಿಶಿಷ್ಟ ವರ್ಗದ ಮೀಸಲಾತಿ ಏರಿಕೆ ಮಾಡಿರುವುದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷವನ್ನು ನಿದ್ದೆಗೆಡುವಂತೆ ಮಾಡಿದೆ. ಮೀಸಲಾತಿ ಏರಿಸುವಂತೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರೂ ಗಣನೆಗೆ ತೆಗೆದುಕೊಂಡಿಲ್ಲವೆಂದು ಸ್ವಾಮೀಜಿಗಳು ಹೇಳಿದ್ದಾರೆ. ಕಾಂಗ್ರೆಸ್ ಮೀಸಲಾತಿಗೆ ವಿರೋಧಿಸಿದ್ದೇಕೆ’ ಎಂದು ಬಿಜೆಪಿ ಪ್ರಶ್ನಿಸಿದೆ.

ADVERTISEMENT

’ಸಾಂವಿಧಾನಿಕ ಬಿಕ್ಕಟ್ಟುಗಳನ್ನು ಎದುರಿಸಲು ಮತ್ತು ನಿವಾರಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ. ನ್ಯಾಯ ಮಾರ್ಗದಲ್ಲೇ ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಕೊಡಿಸುತ್ತೇವೆ. ಅಧಿಕಾರದಲ್ಲಿದ್ದಾಗ ಪರಿಶಿಷ್ಟ ವರ್ಗದವರ ನ್ಯಾಯಯುತ ಬೇಡಿಕೆಯನ್ನು ತಿರಸ್ಕರಿಸಿದ ಕಾಂಗ್ರೆಸ್‌ ಇಂದು ಮೊಸರಲ್ಲಿ ಕಲ್ಲು ಹುಡುಕುತ್ತಿರುವುದೇಕೆ’ ಎಂದು ಬಿಜೆಪಿ ಕೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.