ADVERTISEMENT

ಚುನಾವಣೆ ಬರುತ್ತಿದ್ದಂತೆ ಕಾಂಗ್ರೆಸ್ ಟೂಲ್‌ಕಿಟ್ ಸುದ್ದಿಗಳು ಆರಂಭವಾಗಿವೆ: ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಡಿಸೆಂಬರ್ 2022, 10:02 IST
Last Updated 1 ಡಿಸೆಂಬರ್ 2022, 10:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‌ನ ಟೂಲ್‌ಕಿಟ್ ಸುದ್ದಿಗಳು ಆರಂಭವಾಗಿವೆ. ಅದರಲ್ಲಿ ಒಂದು‘ಪ್ರತ್ಯೇಕ ಮುಸ್ಲಿಂ ಕಾಲೇಜು’ ಸುದ್ದಿ ಎಂದು ಬಿಜೆಪಿ ಆರೋಪಿಸಿದೆ.

ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ‘ಸರ್ಕಾರದಿಂದ ಈ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ, ಕಾಂಗ್ರೆಸ್‌ಗೆ ಕೆಲಸವೂ ಇಲ್ಲ’ ಎಂದು ಕಿಡಿಕಾರಿದೆ.

ಪ್ರತ್ಯೇಕ ಕಾಲೇಜು ತೆರೆಯುವ ಬಗ್ಗೆ ಚರ್ಚೆಯಾಗಿಲ್ಲ: ಸಿಎಂ ಬೊಮ್ಮಾಯಿ
ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು, ಹಿಜಾಬ್ ಧರಿಸಲು ಅನುಮತಿ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ‌ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.