ADVERTISEMENT

ಶಿರಾ ಉಪಚುನಾವಣೆ: ಎಂಟು ಆಕಾಂಕ್ಷಿಗಳು

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 23:46 IST
Last Updated 23 ಸೆಪ್ಟೆಂಬರ್ 2020, 23:46 IST
 ರವಿಕುಮಾರ್
ರವಿಕುಮಾರ್    

ಬೆಂಗಳೂರು: ’ತುಮಕೂರು ಜಿಲ್ಲೆಯ ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಲ್ಲಿ ಎಂಟಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್‌–ಜೆಡಿಎಸ್‌ ಅಂತಿಮವಾಗಿ ಯಾರನ್ನು ಕಣಕ್ಕೆ ಇಳಿಸುತ್ತಾರೋ ನೋಡಿಕೊಂಡು ಬಿಜೆಪಿ ಅಭ್ಯರ್ಥಿ ಹೆಸರು ಘೋಷಿಸಲಾಗುವುದು’ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

‘ಶಿರಾದಲ್ಲಿ ಬಿಜೆಪಿ ಪರ ಅಲೆ ಇದೆ. ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ.264 ಬೂತ್ ಗಳಲ್ಲಿ ಸಮಿತಿ ರಚಿಸಿ, ವಾಟ್ಸ್‌ಆ್ಯಪ್‌ ಗ್ರೂಪ್‌ ರಚನೆ ಮಾಡುತ್ತೇವೆ’ ಎಂದು ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ‘ಅ.2ರಂದು ಎರಡು ಸಭೆ ನಡೆಸಲಾಗುವುದು. ನಂತರ, ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT