ಸಿದ್ದರಾಮಯ್ಯ, ಡಿಕೆಶಿ
ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಅಂತಿಮ. ಹೈಕಮಾಂಡ್ ಜೊತೆ ಶಾಸಕರ ನಿರ್ಧಾರವೂ ಮುಖ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಿಲ್ಲೆಯ ಬಂಡಿಗಣಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗುವುದಕ್ಕೆ ಆಗುವುದಿಲ್ಲ. ಬಹುಮತ ಇದ್ದರೆ ಆಗಬಹುದು. ಜೊತೆಗೆ ಹೈಕಮಾಂಡ್ ಆಶೀರ್ವಾದನೂ ಬೇಕು ಎಂದರು.
ಆರ್.ಎಸ್.ಎಸ್ ನವರ ಕಾರ್ಯಕ್ರಮಗಳಿಗೆ ಸರ್ಕಾರದ ಜಾಗ ನೀಡದಿರುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೆ, ಆ ರೀತಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದರು
ಡಿನ್ನರ್ ಪಾರ್ಟಿಗೆ, ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ಆಗಾಗ ಊಟಕ್ಕೆ ಕರೆಯುತ್ತೇನೆ. ಊಟಕ್ಕೆ ಕರೆದಿದ್ದರಲ್ಲಿ ಯಾವುದೇ ವಿಶೇಷವಿಲ್ಲ. ನಿಮಗೆ (ಪತ್ರಕರ್ತರಿಗೆ) ಹಾಗೂ ಬಿಜೆಪಿಯವರಿಗೆ ವಿಶೇಷವಾಗಿದೆ ಎಂದು ನಕ್ಕರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.