ಬೆಂಗಳೂರು: ನನ್ನ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದಲ್ಲೇ ಭಿನ್ನಾಭಿಪ್ರಾಯ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು.
ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ, ಭಿನ್ನಾಭಿಪ್ರಾಯ ಇಲ್ಲ. ಪಕ್ಷಕ್ಕೆ ಧಕ್ಕೆ ಆಗುವಂತಹ ಭಿನ್ನಾಭಿಪ್ರಾಯ ಇಲ್ಲ ಎಂದರು.
ವೀಕ್ಷಕರು ನೀಡಿದ ಶಿಫಾರಸ್ಸಿನ ಮೇಲೆಕೆಪಿಸಿಸಿಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಚುನಾವಣೆಗೆಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದಾರೆಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.