ADVERTISEMENT

ಜನರು ದಡ್ಡರಲ್ಲ, ಎಲ್ಲವನ್ನೂ ನೋಡುತ್ತಿದ್ದಾರೆ: ಶಾಮನೂರು ಶಿವಶಂಕರಪ್ಪ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 19:31 IST
Last Updated 4 ಸೆಪ್ಟೆಂಬರ್ 2021, 19:31 IST
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ   

ದಾವಣಗೆರೆ: ‘ವೀರಶೈವ ಬೇರೆ, ಲಿಂಗಾಯತ ಬೇರೆ ಎಂದು ಹೇಳುತ್ತಿದ್ದವರು ಕಾಂಗ್ರೆಸ್‌ ಸೋತು ಸುಣ್ಣವಾದ ಮೇಲೆ ಎರಡೂ ಒಂದೇ ಎಂದು ಹೇಳಿಕೊಂಡು ಬರುತ್ತಿದ್ದಾರೆ’ ಎಂದು ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಟೀಕಿಸಿದ್ದಾರೆ.

ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಎಂ.ಬಿ.ಪಾಟೀಲ ಹೇಳಿದ್ದಾರೆ. ಅದು ಸರಿ. ಬೇರೆ ಮಾಡಲು ಹೊರಟವರು ಒಂದೇ ಎನ್ನುತ್ತಿರುವುದು ಒಳ್ಳೆಯ ಬೆಳವಣಿಗೆ. ಜನರು ದಡ್ಡರಲ್ಲ. ಎಲ್ಲವನ್ನೂ ನೋಡುತ್ತಿದ್ದಾರೆ. ನಾವೂ ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗುತ್ತೇವೆ’ ಎಂದರು.

‘ಜಾಮದಾರನನ್ನು ಮೊದಲು ಹುಚ್ಚಾಸ್ಪತ್ರೆಗೆ ಕಳುಹಿಸಬೇಕು. ವೀರಶೈವ ಲಿಂಗಾಯತ ಧರ್ಮದಲ್ಲಿ 99 ಉಪ ಪಂಗಡಗಳಿವೆ. ಎಲ್ಲರೂ ಒಂದೇ. ಅದರಲ್ಲಿ ಜಾಮದಾರ್ ಯಾರು ಅನ್ನೋದು ಮೊದಲು ನಿರ್ಣಯಿಸಲಿ. ಅಧಿಕಾರದಲ್ಲಿ ಇದ್ದಾಗ ಯಾರಿಗೂ ಸಹಾಯ ಮಾಡಲಿಲ್ಲ. ಈಗ ನೂರೆಂಟು ಮಾತನಾಡುತ್ತಾನೆ’ ಎಂದೂ ಶಾಮನೂರು ಕಿಡಿಕಾರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.