ADVERTISEMENT

ಮುಖ್ಯಮಂತ್ರಿ ಹುದ್ದೆಗೆ ನಾನೇಕೆ ರಾಜೀನಾಮೆ ಕೊಡಲಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2025, 14:12 IST
Last Updated 29 ಏಪ್ರಿಲ್ 2025, 14:12 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ‘ಮುಖ್ಯಮಂತ್ರಿ ಹುದ್ದೆಗೆ ನಾನೇಕೆ ರಾಜೀನಾಮೆ ನೀಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

‘ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ಮೇಲೆ ಕೈಎತ್ತಿದ ಘಟನೆಗೆ ಸಂಬಂಧಿಸಿದಂತೆ ವಿರೋಧಪಕ್ಷಗಳು ನಿಮ್ಮ ರಾಜೀನಾಮೆ ಕೇಳಿವೆಯಲ್ಲ’ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು, ‘ಬಿಜೆಪಿಯವರು ಏನು ಬೇಕಾದರೂ ಹೇಳಿಕೊಂಡು ಆನಂದಿಸಲಿ, ನಾನು ರಾಜೀನಾಮೆ ನೀಡುವುದಿಲ್ಲ’ ಎಂದರು.

ADVERTISEMENT

‘ನಿನ್ನೆಯ (ಸೋಮವಾರದ) ಘಟನೆಗೆ ಪ್ರತಿಕ್ರಿಯಿಸುವುದಿಲ್ಲವೇ’ ಎಂಬ ಪ್ರಶ್ನೆಗೆ ಇಲ್ಲ, ‘ಏನು ಹೇಳಬೇಕೋ ಅದನ್ನು ಈಗಾಗಲೇ ಹೇಳಿದ್ದೇನೆ. ಪ್ರತಿಕ್ರಿಯಿಸುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.