ADVERTISEMENT

ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್‌ಗೆ ಕೋವಿಡ್ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜನವರಿ 2022, 14:44 IST
Last Updated 14 ಜನವರಿ 2022, 14:44 IST
ವಿ. ಸುನಿಲ್ ಕುಮಾರ್‌ (ಸಂಗ್ರಹ ಚಿತ್ರ)
ವಿ. ಸುನಿಲ್ ಕುಮಾರ್‌ (ಸಂಗ್ರಹ ಚಿತ್ರ)   

ಬೆಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್‌ಗೆ ಕೋವಿಡ್ ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

‘ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಸಚಿವರು ಟ್ಚೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶುಕ್ರವಾರ 28,723 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 20,121 ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಶೇ 12.98ಕ್ಕೆ ಏರಿಕೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.