ADVERTISEMENT

ಎಲ್ಲ ಜಿಲ್ಲೆಗಳಲ್ಲಿ ಸೇನಾ ಪೂರ್ವ ತರಬೇತಿ ಶಾಲೆ: ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 13:05 IST
Last Updated 5 ಸೆಪ್ಟೆಂಬರ್ 2022, 13:05 IST
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ    

ಉಡುಪಿ: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಆರಂಭವಾಗುತ್ತಿರುವ ಸೇನಾ ಪೂರ್ವ ತರಬೇತಿ ಶಾಲೆಗಳನ್ನು ಮುಂದೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆರಂಭಿಸಿ ಮಹಿಳೆಯರಿಗೂ ತರಬೇತಿ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಕಿದಿಯೂರು ಹೋಟೆಲ್ ಸಭಾಂಗಣದಲ್ಲಿ ಸೋಮವಾರ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸೇನಾ ಪೂರ್ವ ತರಬೇತಿ ಶಾಲೆಗಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರು ಇಡಲಾಗುವುದು. ಮುಂದೆ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ದೈಹಿಕ ಶಿಕ್ಷಕರ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇ 50 ಹುದ್ದೆಗಳನ್ನು ಮೀಸಲಿಡುವ ಚಿಂತನೆ ಇದೆ ಎಂದರು.

ತರಬೇತಿ ಶಾಲೆಯಲ್ಲಿ 100 ಮಂದಿಗೆ ಪ್ರವೇಶಾತಿ ಅವಕಾಶವಿದ್ದು ನಾಲ್ಕು ತಿಂಗಳು ಊಟ, ವಸತಿ ಸಹಿತ ರಾಷ್ಟ್ರೀಯ ಮಾನ್ಯತೆ ಪಡೆದ ಸಂಸ್ಥೆಯಿಂದ ತರಬೇತಿ ದೊರೆಯಲಿದೆ. ತರಬೇತಿ ಪಡೆದವರು ಅಗ್ನಿವೀರರ ಹುದ್ದೆಗೆ ಸುಲಭವಾಗಿ ಆಯ್ಕೆಯಾಗುವ ಸಂಭವ ಹೆಚ್ಚಾಗಿರುತ್ತದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.