ಸಿದ್ದರಾಮಯ್ಯ
ಬೆಂಗಳೂರು: ವಿಧಾನ ಮಂಡಲದ ಅಧಿವೇಶನ ಮುಗಿದ ಬೆನ್ನಲ್ಲೇ, ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 5ರಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಲಿದ್ದಾರೆ.
ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಿದ್ದ ಜಂಟಿ ಅಧಿವೇಶನ ಬುಧವಾರ (ಫೆ.4) ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಯಿತು.
ಮಾರ್ಚ್ ತಿಂಗಳಲ್ಲಿ ತಮ್ಮ 17 ನೇ ಬಜೆಟ್ ಮಂಡನೆಗೆ ತಯಾರಿ ಆರಂಭಿಸಿರುವ ಸಿದ್ದರಾಮಯ್ಯ ಅವರು ಗುರುವಾರವೇ 10 ಇಲಾಖೆಗಳ ಜತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ರೇಸ್‌ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಬೆಳಿಗ್ಗೆ 11ಕ್ಕೆ ಆರಂಭವಾಗಲಿರುವ ಸಭೆಯು, ಸಂಜೆ 6ರವರೆಗೆ ನಡೆಯಲಿದೆ.
ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಪ್ರತ್ಯೇಕವಾಗಿ ಸಭೆಗೆ ಕರೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.