ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಮತ್ತೆ ಸಿಐಡಿ ವಶಕ್ಕೆ ಅಮ್ರಿತ್ ಪೌಲ್

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 21:44 IST
Last Updated 16 ನವೆಂಬರ್ 2022, 21:44 IST
   

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಆರೋಪಿ, ಐಪಿಎಸ್‌ ಅಧಿಕಾರಿ ಅಮ್ರಿತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬುಧವಾರ ಸಿಐಡಿ ತಂಡವು ಮತ್ತೆ ವಶಕ್ಕೆ ಪಡೆದುಕೊಂಡಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಅಮ್ರಿತ್ ಪೌಲ್ ಅವರನ್ನು ಸಿಐಡಿಯ ಡಿವೈಎಸ್‌ಪಿ ಅಂಜುಪಾಲ ಅವರ ನೇತೃತ್ವದ ತಂಡವು ವಿಚಾರಣೆ ನಡೆಸುತ್ತಿದೆ.

ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗೆ ನ್ಯಾಯಾಲಯದ ಅನುಮತಿ ಪಡೆದು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.