ADVERTISEMENT

PSI ನೇಮಕಾತಿ ಅಕ್ರಮ: ಲಿಂಗಸುಗೂರು ಡಿವೈಎಸ್ಪಿ, ಕಲಬುರಗಿ ಸಿಪಿಐ ಬಂಧನ?

​ಪ್ರಜಾವಾಣಿ ವಾರ್ತೆ
Published 5 ಮೇ 2022, 10:39 IST
Last Updated 5 ಮೇ 2022, 10:39 IST
ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೈತ್ರಿ (ಕೆಂಪು ಅಂಗಿ) ಹಾಗೂ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಅವರನ್ನು, ಗುರುವಾರ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಯಿತು.

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೈತ್ರಿ ಅವರನ್ನು, ಗುರುವಾರ ಸಿಐಡಿ ಅಧಿಕಾರಿಗಳು ವೈದ್ಯಕೀಯ ತಪಾಸಣೆಗೆ ಕರೆದೊಯ್ದರು.

ಇಬ್ಬರನ್ನೂ ವೈದ್ಯಕೀಯ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸಂಜೆಗೆ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಸಿಐಡಿ ಮೂಲಗಳು ಮಾಹಿತಿ ನೀಡಿವೆ.

ಈ ಇಬ್ಬರೂ ಅಧಿಕಾರಿಗಳನ್ನು ಬುಧವಾರ ನಿರಂತರ ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ಗುರುವಾರ ಬೆಳಿಗ್ಗೆ ಮತ್ತೆ ಕರೆಸಿದ್ದರು. ಮಧ್ಯಾಹ್ನ 3.30ರವದೆಗೂ ತೀವ್ರ ವಿಚಾರಣೆ ನಡೆಸಿದರು.

ADVERTISEMENT

ಬ್ಲೂಟೂತ್ ಬಳಸಿ ವಾಮಮಾರ್ಗದ ಮೂಲಕ ಅಭ್ಯರ್ಥಿಗಳನ್ನು ಪಾಸ್ ಮಾಡಿಸಲು, ಆರೋಪಿ ರುದ್ರಗೌಡ ಪಾಟೀಲ ಬಳಿ 'ಡೀಲ್' ಮಾಡಿದ ಆರೋಪ ಇವರ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.