ADVERTISEMENT

ಏ. 16ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2022, 9:38 IST
Last Updated 8 ಫೆಬ್ರುವರಿ 2022, 9:38 IST
   

ಬೆಂಗಳೂರು: ಪ್ರಸಕ್ತ ಸಾಲಿನ (2021–22) ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಏಪ್ರಿಲ್‌ 16ರಿಂದ ಮೇ 6ರವರೆಗೆ ನಡೆಯಲಿದೆ.

ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ.

ವೇಳಾಪಟ್ಟಿಯ ಪ್ರಕಾರ, ಏಪ್ರಿಲ್‌ 16ರಂದು ಗಣಿತ, 18ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, 20ರಂದು ಇತಿಹಾಸ, ಭೌತವಿಜ್ಞಾನ, 21ರಂದು ಸಂಸ್ಕೃತ, 22ರಂದು ವ್ಯವಹಾರ ಅಧ್ಯಯನ, 23ರಂದು ರಸಾಯನ ವಿಜ್ಞಾನ, 25ರಂದು ಅರ್ಥಶಾಸ್ತ್ರ, 26ರಂದು ಹಿಂದಿ, 28ರಂದು ಕನ್ನಡ, 30ರಂದು ಸಮಾಜಶಾಸ್ತ್ರ, ಮೇ 2ರಂದು ಭೌತವಿಜ್ಞಾನ, ಭೋಗೋಳ ವಿಜ್ಞಾನ, ಮೇ 4ರಂದು ಇಂಗ್ಲಿಷ್‌, ಮೇ 6ರಂದು ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ವಿಜ್ಞಾನ ಪರೀಕ್ಷೆಗಳು ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.