ADVERTISEMENT

ರಾಜ್ಯದ ವಿವಿಧೆಡೆ ಮಳೆ ಮುಂದುವರಿಕೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 14:48 IST
Last Updated 31 ಆಗಸ್ಟ್ 2025, 14:48 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

 ಪ್ರಜಾವಾಣಿ ಚಿತ್ರ: ತಾಜುದ್ದೀನ್‌ ಆಜಾದ್‌

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ಮೂರು ದಿನಗಳು ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಬಳಿಕ ಮಳೆಯ ತೀವ್ರತೆ ತಗ್ಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಸೋಮವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕಲಬುರಗಿ ಹಾಗೂ ಬೀದರ್‌ ಜಿಲ್ಲೆಗೂ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವೆಡೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಾಗೂ ಬುಧವಾರ ಧಾರಾಕಾರ ಮಳೆಯಾಗುವ ಸಂಭವವಿದ್ದು, ಮೂರೂ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಗುರುವಾರ ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ: ಇದೇ 5 ರವರೆಗೆ ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಸಮುದ್ರ ಪ್ರದೇಶಗಳಿಗೆ ಹೋಗದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದ್ದು, ತುಂತುರು ಮಳೆಯಾಗುವ ಸಂಭವವಿದೆ. ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.