ADVERTISEMENT

ಕರಾವಳಿಯಲ್ಲಿ ಭಾರಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆ ಸಂಭವ: KSNDMC

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಟ್ವಿಟರ್‌ನಲ್ಲಿ ಮಾಹಿತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಆಗಸ್ಟ್ 2023, 11:51 IST
Last Updated 19 ಆಗಸ್ಟ್ 2023, 11:51 IST
ಕಲಬುರಗಿಯಲ್ಲಿ ಶನಿವಾರ ಜಿಟಿ ಜಿಟಿ ಮಳೆಯಲ್ಲೇ ಸಾಗಿದ ವಾಹನಗಳು-ಪ್ರಜಾವಾಣಿ ಚಿತ್ರ
ಕಲಬುರಗಿಯಲ್ಲಿ ಶನಿವಾರ ಜಿಟಿ ಜಿಟಿ ಮಳೆಯಲ್ಲೇ ಸಾಗಿದ ವಾಹನಗಳು-ಪ್ರಜಾವಾಣಿ ಚಿತ್ರ   

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಂಭವ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಕೇಂದ್ರ ತಿಳಿಸಿದೆ.

ಈ ವಿಚಾರವನ್ನು KSNDMC ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ, ಹಲವೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ADVERTISEMENT

ಬೆಂಗಳೂರು ಸೇರಿದಂತೆ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಕಳೆದ ಜುಲೈನಲ್ಲಿ ವಾಡಿಕೆಗಿಂತ ಅಧಿಕವಾಗಿ ಸುರಿದಿದ್ದ ಮಳೆ ಆಗಸ್ಟ್ ಮೊದಲ ಹಾಗೂ ಎರಡನೇ ವಾರದಲ್ಲಿ ಕಳೆಗುಂದಿತ್ತು. ಬಹುತೇಕ ರಾಜ್ಯದಾದ್ಯಂತ ಮಳೆ ಕಣ್ಮರೆಯಾಗಿತ್ತು. ಇದೀಗ ಮಳೆ ಬಿರುಸು ಪಡೆದುಕೊಳ್ಳುವ ಮುನ್ಸೂಚನೆ ಕಾಣಿಸಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.