ADVERTISEMENT

ಪ್ರವಾಹ: ಮೃತರ ಸಂಖ್ಯೆ 12ಕ್ಕೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2019, 18:55 IST
Last Updated 22 ಅಕ್ಟೋಬರ್ 2019, 18:55 IST
ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿರುವ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ರಸ್ತೆ  –ಪ್ರಜಾವಾಣಿ ಚಿತ್ರ
ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿರುವ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ರಸ್ತೆ  –ಪ್ರಜಾವಾಣಿ ಚಿತ್ರ   

ಬೆಂಗಳೂರು:ಕಳೆದೆರಡು ದಿನಗಳ ಭಾರಿ ಮಳೆ ಮತ್ತು ಪ್ರವಾಹದಿಂದ ಒಟ್ಟು 12 ಮಂದಿ ಮೃತಪಟ್ಟಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತರಾಗಿದ್ದಾರೆ.

ಒಟ್ಟು 13 ಜಿಲ್ಲೆಗಳು ಮಳೆ ಮತ್ತು ಪ್ರವಾಹದಿಂದ ಬಾಧಿತವಾಗಿದ್ದು, ಎಂಟು ಜಿಲ್ಲೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. 5,444 ಮನೆಗಳಿಗೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಪ್ರವಾಹ ಪೀಡಿತ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಬುಧವಾರದಿಂದಲೇ ಭೇಟಿ ನೀಡಲಿದ್ದಾರೆ. ಎರಡು–ಮೂರು ದಿನಗಳಲ್ಲಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.ಕೇಂದ್ರ ಸರ್ಕಾರಕ್ಕೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಲ್ಲಿಸಿ, ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದರು.

ADVERTISEMENT

ಬೆಳಗಾವಿ–2, ಬಾಗಲಕೋಟೆ–1, ಚಿಕ್ಕಮಗಳೂರು–1, ಕೊಡಗು–2, ಹಾವೇರಿ–1, ಚಿತ್ರದುರ್ಗ–2, ಗದಗ–3, ಧಾರವಾಡಜಿಲ್ಲೆ–1, ಒಟ್ಟು 12 ಮಂದಿ ಮೃತಪಟ್ಟಿದ್ದಾರೆ. ಈ ಜಿಲ್ಲೆಗಳಲ್ಲಿ 2176 ಮಂದಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಎನ್‌ಡಿಆರ್‌
ಎಫ್‌ನ ಎರಡು ತಂಡಗಳನ್ನು ಬೆಳಗಾವಿಗೆ ಕಳುಹಿಸಲಾಗಿದೆ. ಎಸ್‌ಡಿಆರ್‌ಎಫ್‌ ನ ಎರಡು ತಂಡಗಳನ್ನು ಬೆಳಗಾವಿ ಜಿಲ್ಲೆಯಲ್ಲಿ ನಿಯೋಜಿಸಲಾಗಿದೆ. ಮತ್ತೊಂದು ತಂಡವನ್ನು ಗದಗ ಜಿಲ್ಲೆಗೆ ನಿಯೋಜಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.