ADVERTISEMENT

ರಾಜ್ಯದಲ್ಲಿ ಮತ್ತೆ ಮಳೆ: 5 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌

ಪಿಟಿಐ
Published 12 ನವೆಂಬರ್ 2022, 4:24 IST
Last Updated 12 ನವೆಂಬರ್ 2022, 4:24 IST
   

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಿದೆ.

ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಈ ಜಿಲ್ಲೆಗಳ ಅಲ್ಲಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆತಿಳಿಸಿದೆ.

ಬೆಂಗಳೂರು ನಗರ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಸುರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.