ADVERTISEMENT

ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ | 5 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್: ಹವಾಮಾನ ಇಲಾಖೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 18:44 IST
Last Updated 25 ಫೆಬ್ರುವರಿ 2026, 18:44 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಗದಗ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. 

ADVERTISEMENT

ಕರಾವಳಿಯಲ್ಲಿ ದಕ್ಷಿಣ ಕನ್ನಡದ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಕೊಡಗು, ಮೈಸೂರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. 

ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವೆಡೆ ಮಳೆಯಾಗಿದೆ. ಚಾಮರಾಜನಗರದ ಬಂಡೀಪುರದಲ್ಲಿ 3 ಸೆಂ.ಮೀ. ಮಳೆ ಸುರಿದರೆ, ಉತ್ತರ ಕನ್ನಡದ ಯಲ್ಲಾಪುರ, ಮೈಸೂರಿನ ಸುತ್ತೂರು ಹಾಗೂ ಗದಗದ ಶಿರಹಟ್ಟಿಯಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ. ಮಂಡ್ಯದ ಮದ್ದೂರು ಸೇರಿ ಕೆಲವೆಡೆ 1 ಸೆಂ.ಮೀ. ಹಾಗೂ ಅದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.