ADVERTISEMENT

ರಾಜ್ಯದಲ್ಲಿ ಮೂರು ದಿನ ಗುಡುಗು ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 5:37 IST
Last Updated 1 ಏಪ್ರಿಲ್ 2023, 5:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಮೈಸೂರು, ಕೋಲಾರ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಸೂಚಿಸಿದೆ.

ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕಲಬುರಗಿ ಜಿಲ್ಲೆಯಲ್ಲಿ ಶುಕ್ರವಾರ ಗರಿಷ್ಠ ಉಷ್ಣಾಂಶ 38.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬಾಗಲಕೋಟೆಯಲ್ಲಿ ಕನಿಷ್ಠ 14.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿ ವೇಳೆ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ತಿಳಿಸಿದೆ.

ADVERTISEMENT

ಗುರುವಾರ ಚಾಮರಾಜನಗರ ಜಿಲ್ಲೆಯಲ್ಲಿ 1 ಸೆಂ.ಮೀ ಮಳೆ ಸುರಿದಿದೆ. ಜತೆಗೆ, ದಕ್ಷಿಣ ಒಳ
ನಾಡಿನ ಹಲವೆಡೆ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.