ADVERTISEMENT

PHOTOS | ಚಾಮರಾಜನಗರ, ವಿರಾಜಪೇಟೆಯಲ್ಲಿ ಬಿರುಸಿನ ಮಳೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮೇ 2023, 13:31 IST
Last Updated 30 ಮೇ 2023, 13:31 IST
ಚಾಮರಾಜನಗರದಲ್ಲಿ ಮಂಗಳವಾರ ಸುರಿದ ಭರ್ಜರಿ ಮಳೆಗೆ ರಾಜ ಕಾಲುವೆ ಉಕ್ಕಿ ಹರಿದು ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ನೀರು ನಿಂತು ಅವಾಂತರ ಸೃಷ್ಟಿಯಾಯಿತು.
ಚಾಮರಾಜನಗರದಲ್ಲಿ ಮಂಗಳವಾರ ಸುರಿದ ಭರ್ಜರಿ ಮಳೆಗೆ ರಾಜ ಕಾಲುವೆ ಉಕ್ಕಿ ಹರಿದು ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ನೀರು ನಿಂತು ಅವಾಂತರ ಸೃಷ್ಟಿಯಾಯಿತು.   ಪ್ರಜಾವಾಣಿ ಚಿತ್ರ: ಸಿ.ಆರ್.ವೆಂಕಟರಾಮು
ಪ್ರಜಾವಾಣಿ ಚಿತ್ರ: ಸಿ.ಆರ್.ವೆಂಕಟರಾಮು
ಚಾಮರಾಜನಗರ: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಮಧ್ಯಾಹ್ನ ಕಾಲ ಭರ್ಜರಿ ಮಳೆಯಾಗಿದೆ.
ಹವಾಮಾನ ಇಲಾಖೆಯು ಚಾಮರಾಜನಗರ ಜಿಲ್ಲೆಗೆ ಯಲ್ಲೊ ಅಲರ್ಟ್ ಘೋಷಿಸಿದೆ.
ಹಲವು ದಿನಗಳ ಬಳಿಕ ಬಿರುಸಿನ ಮಳೆಯಾಗಿದ್ದು, ಬಿಸಿಲಿನಿಂದಾಗಿ ಬಿಸಿಯಾಗಿದ್ದ ವಾತಾವರಣ ತಂಪಾಯಿತು.
ರಾಜ್ಯದಲ್ಲಿ ಮಳೆಯ ತೀವ್ರತೆಯು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರದಂದು ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ವಿಜಯಪುರ, ಉಡುಪಿ ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದ್ದು, ಜನಜೀವನವು ಅಸ್ತವ್ಯಸ್ತಗೊಂಡಿತು.
ಬುಧವಾರ ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.  
ಕೊಡಗು: ವಿರಾಜಪೇಟೆಯಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ
ವಿರಾಜಪೇಟೆ: ಸುಂಕದ ಕಟ್ಟೆ ಬಳಿ ವಿದ್ಯುತ್ ಕಂಬಗಳು ಧರೆಗುರುಳಿವೆ.
ಇದರಿಂದ ವಿರಾಜಪೇಟೆ-ಸಿದ್ದಾಪುರ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.