ADVERTISEMENT

ರಾಜ್ಯದಾದ್ಯಂತ ಮಳೆ: ಪರಿಹಾರ ಕಾರ್ಯಕ್ಕೆ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಪ್ರವಾಹ ಪೀಡಿತ ಪ್ರದೇಶ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 8:04 IST
Last Updated 23 ಜುಲೈ 2021, 8:04 IST
ಸಿಎಂ ಬಿ.ಎಸ್‌.ಯಡಿಯೂರಪ್ಪ
ಸಿಎಂ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ರಾಜ್ಯದಲ್ಲಿ ಅನೇಕ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಇದ್ದು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಈ ಸಂಬಂಧ ಅವರು ಟ್ವೀಟ್‌ ಮಾಡಿದ್ದು, ಜನ–ಜಾನುವಾರು ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಬೆಳಗಾವಿ ಜಿಲ್ಲಾಧಿಕಾರಿ ಸೇರಿದಂತೆ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಾತನಾಡಿ, ನದಿ ಪಾತ್ರದ ಹಳ್ಳಿಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.