ಕೆಆರ್‌ಎಸ್
- ಪ್ರಜಾವಾಣಿ ಚಿತ್ರ
ಬೆಂಗಳೂರು/ಶ್ರೀರಂಗಪಟ್ಟಣ: ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಬುಧವಾರವೂ ಮುಂದುವರಿದಿದ್ದರೆ, ಕೆಲವೆಡೆ ಮಳೆಯ ರಭಸ ಕಡಿಮೆಯಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಬುಧವಾರ ಸಂಜೆ ವೇಳೆ 111.50 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗಳಿದ್ದು, 34,779 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಎರಡು ದಿನಗಳಲ್ಲಿ ಅಣೆಕಟ್ಟೆಗೆ 3.5 ಅಡಿಗಳಷ್ಟು ನೀರು ಹರಿದು ಬಂದಿದೆ. ಕುಡಿಯಲು ಮತ್ತು ಕೆರೆ, ಕಟ್ಟೆಗಳನ್ನು ತುಂಬಿಸಲು 2,376 ಕ್ಯುಸೆಕ್ ನೀರನ್ನು ನದಿ ಮತ್ತು ನಾಲೆಗಳಿಗೆ ಹರಿಸಲಾಗುತ್ತಿದೆ.
ಒಟ್ಟು 49.452 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 33.258 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 89.5 ಅಡಿ ನೀರಿನ ಸಂಗ್ರಹವಿತ್ತು.
ಉತ್ತರಕನ್ನಡ, ಕೊಡಗು ಜಿಲ್ಲೆಯ ಹಲವೆಡೆ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ಅಡಚಣೆಯಾಗಿರುವ ಪ್ರಕರಣಗಳು ವರದಿಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.