ADVERTISEMENT

ಬೊಮ್ಮಾಯಿ ಅವರೇ, ಶಾರನ್ನು ಪ್ರವಾಹ ವೀಕ್ಷಣೆಗೆ ಕರೆದೊಯ್ಯಲಿಲ್ಲ ಏಕೆ?: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಆಗಸ್ಟ್ 2022, 9:31 IST
Last Updated 6 ಆಗಸ್ಟ್ 2022, 9:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ಆಸ್ತಿಪಾಸ್ತಿ, ಬೆಳೆ ಹಾನಿ ಸಂಭವಿಸಿದೆ.

ನೆರೆ ಪರಿಹಾರ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದೆ.

‘ಮಳೆ ಅಬ್ಬರಕ್ಕೆ ಹಲವು ಮಂದಿ ಜೀವ ಬಿಟ್ಟಿದ್ದಾರೆ, ಅಪಾರ ಬೆಳೆ ಹಾನಿಯಾಗಿದೆ. ಬೊಮ್ಮಾಯಿ ಅವರೇ, ನೆರೆ ಪರಿಹಾರ ಕೇಳಲು ದೆಹಲಿಗೆ ಹೋಗುವ ಅಗತ್ಯವಿರಲಿಲ್ಲ. ಎನ್‌ಡಿಆರ್‌ಎಫ್‌ ಮುಖ್ಯಸ್ಥ ಅಮಿತ್ ಶಾ ಅವರೇ ಬಂದಿದ್ದರು. ಪ್ರವಾಹ ವೀಕ್ಷಣೆಗೆ ಕರೆದೊಯ್ಯಲಿಲ್ಲ ಏಕೆ? ಪರಿಹಾರದ ಬಗ್ಗೆ ಮಾತನಾಡಲಿಲ್ಲ ಏಕೆ? ಪರಿಹಾರ ಕೇಳುವುದಕ್ಕೆ ಭಯವೇ, ಪರಿಹಾರ ಸಿಗದು ಎಂಬ ತಾತ್ಸಾರವೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ADVERTISEMENT

‘ಕರ್ನಾಟಕದಲ್ಲಿ 25 ಬಿಜೆಪಿ ಸಂಸದರಿದ್ದಾರೆ, ಕರ್ನಾಟಕದಿಂದ 6 ಕೇಂದ್ರ ಸಚಿವರಿದ್ದಾರೆ, ಡಬಲ್ ಇಂಜಿನ್ ಸರ್ಕಾರವಿದೆ. ಇಷ್ಟೆಲ್ಲ ಇರುವುದು ‘ಊಟಕ್ಕೆ ಸಿಗದ ಉಪ್ಪಿನಕಾಯಿಯಂತೆ’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಅವರ ಬಳಿ ಯಾರೊಬ್ಬರೂ ರಾಜ್ಯದ ನೆರೆ ಪರಿಸ್ಥಿತಿಯ ಬಗ್ಗೆ ತುಟಿ ಬಿಚ್ಚಲಿಲ್ಲ, ಪರಿಹಾರ ಕೇಳಲಿಲ್ಲ ಏಕೆ ಎಂದು ಕಾಂಗ್ರೆಸ್‌ ಕುಟುಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.