ADVERTISEMENT

ಕೊಡಗಿನ ವಿವಿಧೆಡೆ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 2:17 IST
Last Updated 15 ಸೆಪ್ಟೆಂಬರ್ 2019, 2:17 IST
ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ಶನಿವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು
ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ಶನಿವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು   

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಶನಿವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ. ಸಿದ್ದಾಪುರದಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತಿತ್ತು.ಮಧ್ಯಾಹ್ನದ ನಂತರ ಗುಡುಗು ಸಹಿತ ಭಾರಿ ಮಳೆ ಸುರಿದಿದೆ.

ತಲಕಾವೇರಿ, ಭಾಗಮಂಡಲ, ನೆಲ್ಯಹುದಿಕೇರಿ, ಗುಹ್ಯ, ಕರಡಿಗೋಡು, ಕಾಟಕೇರಿ, ಜೋಡುಪಾಲ ಹಾಗೂ ಮಡಿಕೇರಿ ಸುತ್ತಮುತ್ತ ಭಾರಿ ಮಳೆಯಾಗಿದೆ.

ಧಾರವಾಡದಲ್ಲಿ ಶನಿವಾರ ಮಧ್ಯಾಹ್ನ ಅರ್ಧ ತಾಸು ಜೋರಾಗಿ ಮಳೆ ಸುರಿಯಿತು. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ ಮತ್ತು ಮುಂಡಗೋಡಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿದೆ. ಶಿರಸಿಯಲ್ಲಿ ಮಳೆಯ ನಡುವೆಯೇ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಿತು.

ADVERTISEMENT

ಕರಾವಳಿ: ಸೆ.16ರವರೆಗೆ ಭಾರಿ ಮಳೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 15 ಮತ್ತು 16ರಂದು ಹೆಚ್ಚು ಮಳೆಯಾಗಲಿದೆ. ಬಳಿಕ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೆಪ್ಟೆಂಬರ್‌ 17ರ ಬಳಿಕ ರಾಜ್ಯದ ಹಲವೆಡೆ ಸಾಧಾರಣಕ್ಕಿಂತ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.ಶನಿವಾರ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 6 ಸೆಂ.ಮೀ.ಮಳೆಯಾಗಿದೆ. ಗೇರುಸೊಪ್ಪ 5, ಕುಮಟಾ 4, ಆಗುಂಬೆ 3, ಕಾರ್ಕಳ, ಗೋಕರ್ಣದಲ್ಲಿ ತಲಾ 2 ಸೆಂ.ಮೀ.ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.