ADVERTISEMENT

PHOTOS: ರಾಜ್ಯದ ಹಲವೆಡೆ ಪ್ರವಾಹ ಭೀತಿ ಹೆಚ್ಚಳ

ನೆರೆಯ ಮಹಾರಾಷ್ಟ್ರದಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದ್ದು, ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವುದರಿಂದ ರಾಜ್ಯದ ಬೆಳಗಾವಿ, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜಲಾಶಯಗಳಿಗೆ ಹೊರಹರಿವಿನ ಪ್ರಮಾಣ ಏರಿಕೆಯಾಗಿರುವ ಪರಿಣಾಮ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಜಾಸ್ತಿಯಾಗುತ್ತಿದೆ.

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 9:18 IST
Last Updated 24 ಜುಲೈ 2021, 9:18 IST
ಬೆಳಗಾವಿ ಜಿಲ್ಲೆ ಯಡೂರ ಗ್ರಾಮದ ನಿವಾಸಿಗಳನ್ನು ಎನ್‌ಡಿಆರ್‌ಎಫ್‌ ತಂಡದವರು ಸುರಕ್ಷಿತ ಸ್ಥಳಕ್ಕೆ ಕರೆತಂದರು
ಬೆಳಗಾವಿ ಜಿಲ್ಲೆ ಯಡೂರ ಗ್ರಾಮದ ನಿವಾಸಿಗಳನ್ನು ಎನ್‌ಡಿಆರ್‌ಎಫ್‌ ತಂಡದವರು ಸುರಕ್ಷಿತ ಸ್ಥಳಕ್ಕೆ ಕರೆತಂದರು   
ಮಹಾಲಿಂಗಪುರ ಬಳಿಯ ಢವಳೇಶ್ವರ ಸೇತುವೆ ಘಟಪ್ರಭಾ ನದಿ ನೀರಿನಲ್ಲಿ ಮುಳುಗಡೆಯಾಗಿದೆ. ಸ್ಥಳೀಯರು ನದಿ ನೀರಿನಲ್ಲಿ ವಾಹನಗಳ ತೊಳೆಯುವುದು ಕಂಡುಬಂದಿತು
ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಗಂಗಾವಳಿ ನದಿ ಪ್ರವಾಹಕ್ಕೆ ಗುಳ್ಳಾಪುರದ ಸೇತುವೆ ಕೊಚ್ಚಿ ಹೋಗಿದೆ.
ಯಾದಗಿರಿ ಜಿಲ್ಲೆಯ ಕೊಳ್ಳೂರು (ಎಂ) ಸೇತುವೆ ನೀರಿನಲ್ಲಿ ಮುಳುಗಡೆಯಾಗಿದೆ.
ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಅಕ್ಕಪಕ್ಕದ ಜಮೀನಿಗಳಿಗೆ ನೀರು ನುಗ್ಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.